28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

ಮದುವೆ ಸಂಭ್ರಮ ಮುಗಿಸಿ ಊರಿಗೆ ಮರಳುವಾಗ ದುರಂತ: ಕಂದಕಕ್ಕೆ ಕಾರು ಉರುಳಿ ಮೂವರು ಸಾ*ವು, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮದುವೆ ಸಮಾರಂಭದಲ್ಲಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಂಪುರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದಿದ್ದು ಹೇಗೆ?

ಗೌರಾ-ರಾಂಪುರ ಸಂಪರ್ಕ ರಸ್ತೆಯ ಪಶಾಡ ತಿರುವಿನ ಬಳಿ ಸೋಮವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ನಸುಕಿನ ಜಾವದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆಯಿಂದ ಜಾರಿ ನೇರವಾಗಿ ಆಳವಾದ ಕಂದಕಕ್ಕೆ ಬಿದ್ದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತಕ್ಕೀಡಾದ ಕಾರು ರಾಚೋಲಿ ವ್ಯಾಪ್ತಿಯ ಜಕೋಚಾ ಗ್ರಾಮದ ಕುಮದಾಸ್ ದಾಸ್ ಎಂಬುವವರಿಗೆ ಸೇರಿದ್ದಾಗಿದೆ.

ಮೃತರು ಮತ್ತು ಗಾಯಾಳುಗಳ ವಿವರ

ದುರಂತದಲ್ಲಿ ಪ್ರಾಣ ಕಳೆದುಕೊಂಡವರನ್ನು ರಾಂಪುರದ ರಾಚೋಲಿ ಪ್ರದೇಶದ ಜಗೋಚಾ ಗ್ರಾಮದ ನಿವಾಸಿಗಳಾದ ರಮಾನಂದ್, ಓಂ ಪ್ರಕಾಶ್ ಮತ್ತು ಹಮೇಂದ್ರ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಐವರೂ ಮದುವೆ ಸಮಾರಂಭ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದಾಗ ಈ ದುರಂತ ನಡೆದಿದೆ ಎಂದು ರಾಂಪುರ ಠಾಣಾಧಿಕಾರಿ ರಮೇಶ್ ನೇಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

ರಕ್ಷಣಾ ಕಾರ್ಯಾಚರಣೆ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಂದಕದಿಂದ ಗಾಯಾಳುಗಳನ್ನು ಮೇಲಕ್ಕೆತ್ತಿ ಚಿಕಿತ್ಸೆಗಾಗಿ ರಾಂಪುರದ ಖನೇರಿಯಲ್ಲಿರುವ ಮಹಾತ್ಮ ಗಾಂಧಿ ವೈದ್ಯಕೀಯ ಸೇವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Must Read