28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

ಉತ್ತರಾಖಂಡದಲ್ಲಿ ನೂರು ಮೀಟರ್‌ ಆಳದ ಕಂದಕಕ್ಕೆ ಬಿದ್ದ ಬಸ್‌ : ಆರು ಮಂದಿ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಸ್ಸೊಂದು ಸೇತುವೆಯಿಂದ ಸುಮಾರು ನೂರು ಮೀಟರ್‌ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಕನಿಷ್ಠ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ತೆಹ್ರಿ ಗರ್ವಾಲ್‌ ಜಿಲ್ಲೆಯಲ್ಲಿ ನಡೆದಿದೆ.

ಗುಲರ್‌ ಬಜಾರ್‌ ಸಮೀಪದಲ್ಲಿ ಕಡುವಾದ ತಿರುವು ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಬಸ್‌ ಕಂದಕಕ್ಕೆ ಉರುಳಿದೆ. ಈ ವೇಳೆ ಆರು ಮಂದಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡಗಳು ಆಗಮಿಸಿ ಕಂದಕದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರಕ್ಕೆ ಕರೆತಂದಿದ್ದಾರೆ.ಸ್ಥಳಕ್ಕೆ ಬ್ಯಾಸಿ ಮತ್ತು ಧಲ್ವಾಲಾ ಕೇಂದ್ರಗಳ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ನಿಯೋಜಿಸಲಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯ ಚುರುಕುಗೊಂಡಿದೆ. ಬಸ್‌ನಲ್ಲಿದ್ದ 35 ಮಂದಿಯ ಪೈಕಿ ಸದ್ಯ 20 ಮಂದಿಯನ್ನು ರಕ್ಷಿಸಿ ಹೊರಕ್ಕೆ ಕರೆತರಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳದಲ್ಲಿ ಆಂಬುಲೆನ್ಸ್‌ಗಳು ನಿಂತಿವೆ.

Must Read