28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

ಬೆಳ್ಳಂಬೆಳಗ್ಗೆಯೇ ದುರಂತ: ಚಲಿಸುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆಗಿ ಇಬ್ಬರು ವಿದ್ಯಾರ್ಥಿನಿಯರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಲೇಜಿನ ಪ್ರಾಜೆಕ್ಟ್ ಕೆಲಸದ ನಿಮಿತ್ತ ಪ್ರವಾಸ ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕಾರು ಭೀಕರ ಅಪಘಾತಕ್ಕೀಡಾಗಿ, ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಬೆಳಗಿನ ಜಾವ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ವಿವರ

ಬೆಂಗಳೂರಿನ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ಆರು ಮಂದಿ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಉತ್ತರಿ ಬೆಟ್ಟಕ್ಕೆ ಪ್ರಾಜೆಕ್ಟ್ ವರ್ಕ್‌ಗಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ಕಾರು ವೇಗವಾಗಿ ಸಾಗುತ್ತಿದ್ದಾಗ, ದಿಢೀರನೆ ಟಯರ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, 19 ವರ್ಷದ ವೈಷ್ಣವಿ ಮತ್ತು ಜಾನವಿ ಎಂಬ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಉಳಿದ ನಾಲ್ವರು ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಗನ್ ಮತ್ತು ಜಶ್ವಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಹರ್ಣಿನಿ ಎಸ್. ಮತ್ತು ಹರ್ಣಿಶಿ ಜಿ. ಅವರಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ವಿಷಯ ತಿಳಿಯುತ್ತಿದ್ದಂತೆಯೇ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದೌಡಾಯಿ

Must Read