28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

ಇದು ಸಿನಿಮಾ ಅಲ್ಲ, ತಮಿಳುನಾಡಿನ ಜನರ ಬದುಕಿನ ಪ್ರಶ್ನೆ: ಮೇಕೆದಾಟು ವಿಚಾರದಲ್ಲಿ ಸಿಎಂ ವಿಜಯ್‌ಗೆ ಡಿಎಂಕೆ ಟಾಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮೇಕೆದಾಟು ಅಣೆಕಟ್ಟು ವಿಚಾರ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಡಿಎಂಕೆ ವಾಗ್ದಾಳಿ ನಡೆಸಿದೆ.

ಸಿನಿಮಾ ಕ್ಷೇತ್ರದಿಂದ ರಾಜಕೀಯಕ್ಕೆ ಬಂದಿರುವ ವಿಜಯ್ ಈ ಸೂಕ್ಷ್ಮ ವಿಚಾರವನ್ನು ಗಂಭೀರವಾಗಿ ನಿಭಾಯಿಸುವ ಬದಲು ಸಿನಿಮಾ ಶೈಲಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿರುವ ಡಿಎಂಕೆ, ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯದಲ್ಲಿ ಎಲ್ಲ ರಾಜಕೀಯ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.

ಸಿನಿಮಾದಲ್ಲಿ ಏಕಾಂಗಿಯಾಗಿ ಅಭಿನಯಿಸಬಹುದು

ಸಿನಿಮಾದಲ್ಲಿ ಬೇಕಾದರೆ ಏಕಾಂಗಿಯಾಗಿ ಅಭಿನಯಿಸಬಹುದು. ಆದರೆ ಕಾವೇರಿ ಮತ್ತು ಮೇಕೆದಾಟಿನಂತಹ ಜನರ ಬದುಕಿಗೆ ಸಂಬಂಧಿಸಿದ ವಿಚಾರಗಳಲ್ಲಿ ಎಲ್ಲರನ್ನೂ ಜೊತೆಗೂಡಿಸಿಕೊಂಡು ಮುನ್ನಡೆಯಬೇಕು ಎಂದು ವ್ಯಂಗ್ಯವಾಡಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರೂ ಈ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಟೀಕಿಸಿದೆ.

ಇದನ್ನೂ ಓದಿ:

ಇನ್ನೊಂದೆಡೆ, ಮೇಕೆದಾಟು ಯೋಜನೆಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲ ವ್ಯಕ್ತಪಡಿಸುತ್ತಿರುವುದಕ್ಕೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಎಂ.ಕೆ. ಸ್ಟಾಲಿನ್ ಸರ್ವಪಕ್ಷ ಸಭೆ ಕರೆದು ಯೋಜನೆ ವಿರುದ್ಧ ರಾಜ್ಯದ ಒಗ್ಗಟ್ಟಿನ ನಿಲುವು ಪ್ರಕಟಿಸಲು ಮುಂದಾಗಿದ್ದಾರೆ.

ಜೊತೆಯಾಗಿ ಕಾಣಿಸಿಕೊಂಡ ವಿಜಯ್ ಡಿಕೆಶಿ

ಇತ್ತೀಚೆಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಬಿಡುಗಡೆ ಕಾರ್ಯಕ್ರಮದಲ್ಲಿ ವಿಜಯ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾಗಿದ್ದರು. ಈ ಭೇಟಿಯ ಬಳಿಕ ತಮಿಳುನಾಡಿನ ವಿರೋಧ ಪಕ್ಷಗಳು ವಿಜಯ್ ವಿರುದ್ಧ ಟೀಕಾಪ್ರಹಾರ ನಡೆಸಿವೆ. ಮೇಕೆದಾಟು ವಿಚಾರವನ್ನು ಪ್ರಸ್ತಾಪಿಸದೆ ಕರ್ನಾಟಕ ನಾಯಕರನ್ನು ಭೇಟಿಯಾಗಿರುವುದು ರಾಜ್ಯದ ಹಿತಾಸಕ್ತಿಗೆ ಧಕ್ಕೆ ಎಂದು ಎಐಎಡಿಎಂಕೆ ಆರೋಪಿಸಿದೆ. ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಕೂಡ ವಿಜಯ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆದರೆ ಡಿ.ಕೆ. ಶಿವಕುಮಾರ್, ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಕರ್ನಾಟಕ ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ತೊಂದರೆಯಾಗುವುದಿಲ್ಲ ಎಂಬುದು ಕರ್ನಾಟಕದ ವಾದವಾಗಿದೆ.

Must Read