32.5 C
Mangalore
Wednesday, November 18, 2026
32.5 C
Mangalore
Wednesday, November 18, 2026

ಸೋನಿಯಾ ಕಾರ್ಯಕ್ರಮದಲ್ಲಿ 5ನೇ ಸಾಲಿನಲ್ಲಿ ಕೂತಿದ್ದ ಸಿದ್ದರಾಮಯ್ಯ: ‘ತಡವಾಗಿ ಬಂದಿದ್ದೆ, ಮುಂದಿನ ಸಾಲು ಭರ್ತಿಯಾಗಿತ್ತು’ ಎಂದ ಮಾಜಿ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕತೆ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐದನೇ ಸಾಲಿನಲ್ಲಿ ಕುಳಿತಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.

ಈ ಕುರಿತು ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದರಿಂದ ಮುಂದಿನ ಸಾಲಿನ ಆಸನಗಳು ಭರ್ತಿಯಾಗಿದ್ದವು. ಹೀಗಾಗಿ ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಸೋಮವಾರ ನಡೆದ ಸೋನಿಯಾ ಗಾಂಧಿ ಅವರ ‘Belonging: A Journey of Love’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಹಾಗೂ ಇಂಡಿಯಾ ಮೈತ್ರಿಕೂಟದ ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮದ ಮೊದಲ ಸಾಲಿನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಆಸೀನರಾಗಿದ್ದರು.

ಇದನ್ನೂ ಓದಿ:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಹಲವು ನಾಯಕರು ಎರಡನೇ ಸಾಲಿನಲ್ಲಿ ಕುಳಿತಿದ್ದರು. ಆದರೆ ಸಿದ್ದರಾಮಯ್ಯ ಐದನೇ ಸಾಲಿನಲ್ಲಿ ಕುಳಿತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಪಕ್ಷದ ನಾಯಕತ್ವ ಅವರನ್ನು ಕಡೆಗಣಿಸಿದೆಯೇ ಎಂಬ ಚರ್ಚೆ ಆರಂಭವಾಗಿತ್ತು.

ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದೆ

ಈ ಚರ್ಚೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದೆ. ಆಗ ಮುಂದಿನ ಸಾಲುಗಳಲ್ಲಿ ಆಸನಗಳು ಖಾಲಿ ಇರಲಿಲ್ಲ. ಹೀಗಾಗಿ ಹಿಂದಿನ ಸಾಲಿನಲ್ಲಿ ಕುಳಿತುಕೊಂಡೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರ ಭಾಷಣವೂ ಚೆನ್ನಾಗಿತ್ತು

ಸೋನಿಯಾ ಗಾಂಧಿ ಅವರ ಪುಸ್ತಕ ಓದಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನೂ ಪುಸ್ತಕ ಓದಿಲ್ಲ ಎಂದರು. ಕಾರ್ಯಕ್ರಮ ಉತ್ತಮವಾಗಿ ನಡೆದಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾಷಣವೂ ಚೆನ್ನಾಗಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಆಸನದ ವಿಚಾರವಾಗಿ ಉಂಟಾಗಿದ್ದ ರಾಜಕೀಯ ಚರ್ಚೆಗೆ ಸಿದ್ದರಾಮಯ್ಯ ಅವರ ಸ್ಪಷ್ಟನೆ ಇದೀಗ ತೆರೆ ಎಳೆದಿದ್ದಾರೆ.

Must Read