November 6, 2026
Friday, November 6, 2026
spot_img

ಧಾರವಾಡದಲ್ಲಿ ನೇಣು ಬಿಗಿದು ಸರ್ಕಾರಿ ನೌಕರನ ಆತ್ಮಹ*ತ್ಯೆ: ಸಾವಿನ ಹಿಂದಿನ ಕಾರಣ ನಿಗೂಢ

ಹೊಸದಿಗಂತ ವರದಿ ಧಾರವಾಡ:

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮದಿಹಾಳ ಬಡಾವಣೆಯಲ್ಲಿ ಶನಿವಾರ ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕಲಾರಕೊಪ್ಪ ಗ್ರಾಮದ ನಿವಾಸಿ ರೇವಪ್ಪ ದುರದುಂಡಿ (35) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಧಾರವಾಡ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ದ್ವಿತೀಯ ದರ್ಜೆಯ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ರೇವಪ್ಪ, ಮದಿಹಾಳದ ಬಡಾವಣೆಯ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Must Read