28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

ಸೌಜನ್ಯಾ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಮೆಡಿಕಲ್ ಬೋರ್ಡ್ ರಚಿಸಿದ ಎಸ್‌ಐಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿಯಿಂದ ಮರು ತನಿಖೆ ತೀವ್ರವಾಗಿ ನಡೆಯುತ್ತಿದ್ದು, ತನಿಖೆಗೆ ಈಗ ಮೆಡಿಕಲ್ ಬೋರ್ಡ್ ರಚಿಸಲಾಗಿದೆ.

ಎಸ್‌ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ನೇತೃತ್ವದ ತಂಡ ಮೂರು ಮಂದಿ ನುರಿತ ಎಫ್‌ಎಸ್‌ಎಲ್ ವೈದ್ಯರಿರುವ ತಂಡ ರಚಿಸಿದೆ. ಈ ತಂಡದಲ್ಲಿ ಓರ್ವ ಮಹಿಳಾ ವೈದ್ಯೆ ಸೇರಿದಂತೆ ಬೆಂಗಳೂರು, ಹಾವೇರಿ ಮತ್ತು ಬೆಳಗಾವಿಯ ವೈದ್ಯರಿದ್ದಾರೆ.

ಕಳೆದ 18 ದಿನಗಳಿಂದ ಚೇತನ್ ಸಿಂಗ್ ರಾಥೋಡ್ ನೇತೃತ್ವದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವು ಮಂದಿಯ ವಿಚಾರಣೆಯೂ ನಡೆದಿದ್ದು, ಮಹತ್ವದ ಅಂಶಗಳನ್ನು ಎಸ್‌ಐಟಿ ಕಲೆ ಹಾಕಿದೆ.

Must Read