Home BIG NEWS ತಮಿಳುನಾಡು ಎಲೆಕ್ಷನ್ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಅಣ್ಣಾಮಲೈ ಹೆಸರು ಮಿಸ್ಸಿಂಗ್

ತಮಿಳುನಾಡು ಎಲೆಕ್ಷನ್ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಅಣ್ಣಾಮಲೈ ಹೆಸರು ಮಿಸ್ಸಿಂಗ್

0
ತಮಿಳುನಾಡು ಎಲೆಕ್ಷನ್ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಅಣ್ಣಾಮಲೈ ಹೆಸರು ಮಿಸ್ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿರುವ ನಡುವೆಯೇ ಭಾರತೀಯ ಜನತಾ ಪಕ್ಷ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ಒಟ್ಟು 27 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಆ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ ಈ ಪಟ್ಟಿಯಲ್ಲಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ಹೆಸರು ಕಾಣಿಸದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪಕ್ಷದ ಪಟ್ಟಿಯಲ್ಲಿ ಕೇಂದ್ರ ಸಚಿವ ಎಲ್. ಮುರುಗನ್, ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಸೇರಿದಂತೆ ಹಲವು ಪ್ರಮುಖ ಮುಖಗಳಿಗೆ ಟಿಕೆಟ್ ನೀಡಲಾಗಿದೆ. ದಲಿತರಿಗೆ ಮೀಸಲಾದ ಅವಿನಾಶಿ ಕ್ಷೇತ್ರದಿಂದ ಎಲ್. ಮುರುಗನ್ ಕಣಕ್ಕಿಳಿದರೆ, ಮೈಲಾಪುರ ಕ್ಷೇತ್ರದಿಂದ ತಮಿಳಿಸೈ ಸ್ಪರ್ಧಿಸಲಿದ್ದಾರೆ. ಕೋಯಮತ್ತೂರು ಉತ್ತರದಿಂದ ವಿ. ಶ್ರೀನಿವಾಸನ್ ಹಾಗೂ ಸತ್ತೂರಿನಿಂದ ನಾಯನಾರ್ ನಾಗೇಂದ್ರನ್ ಅಭ್ಯರ್ಥಿಗಳಾಗಿದ್ದಾರೆ.

ಇದನ್ನೂ ಓದಿ:

ಕಳೆದ ಚುನಾವಣೆಯಲ್ಲಿ ಪಕ್ಷದ ಪ್ರಮುಖ ಮುಖವಾಗಿದ್ದ ಅಣ್ಣಾಮಲೈ ಅವರನ್ನು ಈ ಬಾರಿ ಕಣದಿಂದ ದೂರವಿಡಲಾಗಿದೆ ಎಂಬುದು ಅಚ್ಚರಿ ಮೂಡಿಸಿದೆ. ಇದರಿಂದ ಪಕ್ಷದ ಒಳರಾಜಕೀಯ ಮತ್ತು ತಂತ್ರಜ್ಞಾನದ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ. ಆದರೆ ಅಣ್ಣಾಮಲೈ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್‌ನಲ್ಲಿ ಎಲ್ಲ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.

ತಮಿಳುನಾಡಿನ 234 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ. ಎನ್‌ಡಿಎ ಮೈತ್ರಿ 210ಕ್ಕೂ ಹೆಚ್ಚು ಸ್ಥಾನಗಳ ಗೆಲುವಿನ ಗುರಿ ಹೊಂದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.