28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

WEATHER | ಚಳಿಯ ನಡುವೆ ಮಳೆ ಮುನ್ಸೂಚನೆ: ನ.20ರಂದು ಈ ಜಿಲ್ಲೆಗಳಲ್ಲಿ ವರುಣನ ಸಿಂಚನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಸದ್ಯ ಮಳೆಗೆ ವಿರಾಮ ಬಿದ್ದಿದ್ದು, ಎಲ್ಲೆಡೆ ಶುಷ್ಕ ಹವಾಮಾನದೊಂದಿಗೆ ಚಳಿಯ ವಾತಾವರಣ ಕಂಡುಬರುತ್ತಿದೆ. ಸದ್ಯಕ್ಕೆ ರಾಜ್ಯದ ಯಾವುದೇ ಭಾಗದಲ್ಲೂ ವರುಣನ ಆಗಮನದ ಸೂಚನೆಗಳಿಲ್ಲ. ಆದಾಗ್ಯೂ, ನವೆಂಬರ್ 20ರಂದು ರಾಜ್ಯದ ಕರಾವಳಿ ತೀರ ಹಾಗೂ ಒಳನಾಡಿನ ಆಯ್ದ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಯಾವ ಜಿಲ್ಲೆಗಳಲ್ಲಿ ಮಳೆ?

ನವೆಂಬರ್ 20ರಂದು ರಾಜ್ಯದ ಕೆಲವು ಕಡೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡದಲ್ಲಿ ಎಂದಿನಂತೆ ಒಣ ಹವೆ ಇರಲಿದೆ.ಇನ್ನು,ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಅಲ್ಲಲ್ಲಿ ಹಗುರ ಮಳೆಯಾಗುವ ಸೂಚನೆಯಿದೆ. ಈ ಭಾಗದ ಇತರ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ.  

ಅದೇ ರೀತಿ ಮಲೆನಾಡು ವ್ಯಾಪ್ತಿಯ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ವರುಣನ ಸಿಂಚನವಾಗಲಿದೆ. ರಾಜಧಾನಿ ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಮಳೆಯ ನೀರಿಕ್ಷೆಯಿಲ್ಲ.

ದಾವಣಗೆರೆಯಲ್ಲಿ ಅತಿ ಕಡಿಮೆ ತಾಪಮಾನ

ಮುಂಬರುವ ದಿನಗಳಲ್ಲಿ ರಾಜ್ಯದ ಕನಿಷ್ಠ ಉಷ್ಣಾಂಶದಲ್ಲಿ ತೀವ್ರ ಏರಿಳಿತ ಕಾಣಿಸದಿದ್ದರೂ, ಸರಾಸರಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಇಳಿಯುವ ಮುನ್ಸೂಚನೆಯಿದೆ. ಬಯಲು ಸೀಮೆಯ ಜಿಲ್ಲೆಗಳ ಪೈಕಿ ದಾವಣಗೆರೆಯಲ್ಲಿ ರಾಜ್ಯದಲ್ಲೇ ಅತ್ಯಂತ ಕನಿಷ್ಠ ಅಂದರೆ 13.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಮೂಲಕ ಚಳಿಯ ತೀವ್ರತೆ ಹೆಚ್ಚಾಗಿದೆ.

Must Read